







ರಾಮಕುಂಜ: ಕಡಬ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಗಸ್ಟ್ 29 ಮತ್ತು 30ರಂದು ಶ್ರೀ ರಾಮಕುಂಜೇಶ್ವರ ವಸತಿ ಶಾಲಾ ಸಭಾಂಗಣದಲ್ಲಿ ನಡೆಸುವುದರ ಬಗ್ಗೆ ಚರ್ಚಿಸಲು ಹಾಗೂ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಜು.24 ರಂದು ಬೆಳಗ್ಗೆ 10.30ಕ್ಕೆ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ವಿಶ್ವೇಶ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಆಸಕ್ತರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ. ಸೇಸಪ್ಪ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















