ಉಪ್ಪಿನಂಗಡಿ ದಿ| ಯು.ಕೆ ಇಬ್ರಾಹಿಮ್ ರವರ ಮನೆಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

0

ಪುತ್ತೂರು: ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರು ಆಗಿದ್ದ ದಿವಂಗತ ಯುಕೆ ಇಬ್ರಾಹಿಂ ರವರ ಮನೆಗೆ, ಜು.21ರಂದು ಕರ್ನಾಟಕ ಸರಕಾರದ ಮಾಜಿ ಸಚಿವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿದರು.


ಈ ಸಂದರ್ಭ ಅವರು ಯು.ಕೆ ಇಬ್ರಾಹಿಮ್ ರವರ ಪುತ್ರರಾದ ಅಲ್ತಾಫ್ ಯು.ಕೆ. ಮತ್ತು ಶುಕುರ್ ಯು.ಕೆ ಅವರನ್ನು ಮತ್ತು ಕುಟುಂಬಸ್ಥರನ್ನು ಸಂತೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ, ಹಿರಿಯ ಕಾಂಗ್ರೆಸ್ಸಿಗರಾದ ಅಶ್ರಫ್ ಬಸ್ತಿಕರ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮತ್ತು ಯು. ಕೆ. ಅಬೂಬಕರ್ ರವರು ಜೊತೆಗಿದ್ದರು.

LEAVE A REPLY

Please enter your comment!
Please enter your name here