ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಮತದಾನ

0

ಪುತ್ತೂರು: ಪುತ್ತೂರು ವಕೀಲರ ಸಂಘದ 2026-27ರಿಂದ 2027-28ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಬನ್ನೂರು ಆನೆಮಜಲಿನಲ್ಲಿರುವ ನೂತನ ವಕೀಲರ ಭವನದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 10 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.

ಉಳಿದೆಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಅಧ್ಯಕ್ಷ ಸ್ಥಾನಕ್ಕೆ ಸಂತೋಷ್ ಕುಮಾರ್ ಕೆ.,ಶ್ರೀಗಿರೀಶ್ ಮಳಿ ಮತ್ತು ನೂರುದ್ದೀನ್ ಸಾಲ್ಮರ, ಉಪಾಧ್ಯಕ್ಷ ಸ್ಥಾನಕ್ಕೆ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ಥಾನಕ್ಕೆ ಸ್ವಾತಿ ಜಗನ್ನಾಥ ರೈ, ಕೋಶಾಧಿಕಾರಿ ಸ್ಥಾನಕ್ಕೆ ಭಾರತಿ ಎ ಮತ್ತು ಮಮತ ಸುವರ್ಣ ಹಾಗೂ ಜತೆ ಕಾರ್ಯದರ್ಶಿ ಸ್ಥಾನಕ್ಕೆ ಉದಯಚಂದ್ರ ಕರಂಬಾರುರವರು ನಾಮಪತ್ರ ಸಲ್ಲಿಸಿದ್ದರು. 5 ಸ್ಥಾನಗಳಿಗೆ ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿತ್ತು.

ಸಂಜೆ 4ರಿಂದ ಮತ ಎಣಿಕೆ ನಡೆದು ನೂತನ ಅಧ್ಯಕ್ಷರ ಘೋಷಣೆಯಾಗಲಿದೆ. ಇತರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದವರ ಘೋಷಣೆಯೂ ಇದೇ ಸಂದರ್ಭ ನಡೆಯಲಿದೆ.

ಚುನಾವಣಾಧಿಕಾರಿಗಳಾಗಿ ಎಸ್.ಪ್ರವೀಣ್ ಕುಮಾರ್, ಜಯಾನಂದ ಕೆ. ಹಾಗೂ ಮನೋಹರ್ ಎ.ರವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here