ಜು.26: ರಾಮಕುಂಜದಲ್ಲಿ ಒಕ್ಕಲಿಗ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

0

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನದ ಮಹತ್ವ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಜು.26ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.


ಬೆಳಗ್ಗೆ 9ರಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಪೂರ್ವಾಹ್ನ 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಇದರ ಗೌರವಾಧ್ಯಕ್ಷ ಗುಮ್ಮಣ್ಣ ಗೌಡ ಉದ್ಘಾಟಿಸಲಿದ್ದಾರೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ ಅಧ್ಯಕ್ಷತೆ ವಹಿಸಲಿದ್ದಾರೆ. ಒಕ್ಕಲಿಗ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಉಪನ್ಯಾಸ ನೀಡಲಿದ್ದಾರೆ. ಒಕ್ಕಲಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್ ಗೌಡ ಬೈಲು, ಆಲಂಕಾರು ವಲಯ ಉಸ್ತುವಾರಿ ದಯಾನಂದ ಆಲಡ್ಕ, ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಪ್ರಭಾ ದೀಪಕ್ ಕತ್ಲಡ್ಕ ಕೊಂಡ್ಯಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಡಪ್ರಭು ಕೆಂಪೇ ಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ, ನಿವೃತ್ತ ಹಿರಿಯ ಮುಖ್ಯಶಿಕ್ಷಕ ಸಾಂತಪ್ಪ ಗೌಡ ಇಡಾಳ ನೆಲ್ಯೊಟ್ಟು, ಪ್ರಗತಿಪರ ಕೃಷಿಕ ಲೋಕಯ್ಯ ಗೌಡ ಸಂಪ್ಯಾಡಿ, ಪ್ರೇರಕಿ ಲಲಿತಾ ಪಲ್ಲಡ್ಕ ಹಾಗೂ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವೀಣಾ ಆನ, ಊರ್ಮಿಳ ಬಟ್ಟೋಡಿ, ಉತ್ತಮ್ ಪಿ.ವಳೆಂಜ ಅವರಿಗೆ ಕಾರ್ಯಕ್ರಮದಲ್ಲಿ ಗೌರವಾರ್ಪಣೆ ನಡೆಯಲಿದೆ ಎಂದು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆ.ಹಾಗೂ ಪದಾಧಿಕಾರಿಗಳು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here