






ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪೆರ್ಜಿ ನಿವಾಸಿ ಧನಂಜಯ ಗೌಡ (58ವ.)ಅವರು ಜು.23ರಂದು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


ತಡರಾತ್ರಿ ಧನಂಜಯ ಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಗೆ ಬಳಿಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಿದಿದ್ದರು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಧನಂಜಯ ಗೌಡ ಅವರು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ. ಧನಂಜಯ ಗೌಡ ಅವರು ಕೃಷಿ, ಹೈನುಗಾರಿಕೆ ಮಾಡುತ್ತಿದ್ದರು. ಮೃತರು ಪತ್ನಿ ಜಾನಕಿ, ಪುತ್ರಿಯರಾದ ಧನ್ಯ, ಗೌತಮಿ, ಪುತ್ರ ಹರ್ಷಿತ್ ಅವರನ್ನು ಅಗಲಿದ್ದಾರೆ.













