ಸಂಚಾರ ನಿಯಮ ಉಲ್ಲಂಘನೆಗೆ ಸಿಸಿ ಕಣ್ಣು -ಉಪ್ಪಿನಂಗಡಿ, ಗುಂಡ್ಯದಲ್ಲಿ 8 ಕ್ಯಾಮರಾ ಅಳವಡಿಕೆ

0

ಉಪ್ಪಿನಂಗಡಿ: ಅಪರಾಧ ಚಟುವಟಿಕೆ, ಸಂಚಾರ ನಿಯಮಗಳ ಉಲ್ಲಂಘನೆಯ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಿದ್ದು, ಮೊದಲ ಹಂತವಾಗಿ ಉಪ್ಪಿನಂಗಡಿ ಸೇರಿದಂತೆ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನೊಳಗೊಂಡ ಸಿಸಿ ಕ್ಯಾಮರಾಗಳನ್ನು ಅಳವಡಿಸಿದೆ.


ಮೊದಲ ಹಂತವಾಗಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸರ್ಕಲ್‌ನಲ್ಲಿ ನಾಲ್ಕು ಕ್ಯಾಮರಾಗಳನ್ನು ಹಾಗೂ ಗುಂಡ್ಯದಲ್ಲಿ ನಾಲ್ಕು ಕ್ಯಾಮರಾಗಳನ್ನು ಅಳವಡಿಸಿದೆ. ಇನ್ನುಳಿದಂತೆ ವಿಟ್ಲ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ಜು.23ರಿಂದ ಕಾರ್ಯಾರಂಭಗೊಂಡಿದ್ದು, ಈ ಕ್ಯಾಮರಾಗಳು ಅಪರಾಧ ಚಟುವಟಿಕೆಗಳು, ಅಪಘಾತಗಳ ನಿಯಂತ್ರಣಕ್ಕೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆ ಮಾಡಿ ಸಂಬಂಧಪಟ್ಟ ಮಾಲಕರಿಗೆ ನೊಟೀಸ್ ನೀಡಲು ಸಹಕಾರಿಯಾಗಲಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here