







ಪುತ್ತೂರು:ನರಿಮೊಗರು, ಮುಂಡೂರು, ಶಾಂತಿಗೋಡು ಗ್ರಾಮೀಣ ವ್ಯಾಪ್ತಿಯನ್ನೊಳಗೊಂಡ ನರಿಮೊಗರು ಮರಾಟಿ ಸಮಾಜ ಸೇವಾ ಸಂಘದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಮಹಾಸಭೆಯು ಜು.26 ರಂದು ಸಂಘದ ಸಮಾಜ ಮಂದಿರದಲ್ಲಿ ನಡೆಯಲಿದೆ.


ನರಿಮೊಗರು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ಟಿ.ಪಾಂಗ್ಲಾಯಿ, ನಿವೃತ್ತ ಉಪ ನೋಂದಾಣಾಧಿಕಾರಿ ಹರಿಯಪ್ಪ ನಾಯ್ಕ ನೈತಾಡಿ, ಅಮ್ಮುಂಜ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ನಾಯ್ಕರವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜ ಭಾಂದವರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ ಎನ್ ಸಂಪ್ಯ, ಕೋಶಾಧಿಕಾರಿ ಈಶ್ವರ ನಾಯ್ಕ ಅಜಲಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













