







ಪುತ್ತೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಕುಂಬ್ರ ಇದರ ಆಡಳಿತ ಮಂಡಳಿಯಲ್ಲಿ ತೆರವಾಗಿರುವ ನಿರ್ದೇಶಕ ಸ್ಥಾನಕ್ಕೆ ಕೃಷಿಕ ತಿಲಕ್ ರೈ ಕುತ್ಯಾಡಿಯವರನ್ನು ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ.


ಧಾರ್ಮಿಕ, ಶೈಕ್ಷಣಿಕ ಸಾಮಾಜಿಕ, ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪತ್ರಕರ್ತ, ಕೃಷಿಕ ತಿಲಕ್ ರೈ ಕುತ್ಯಾಡಿ, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ,ಮಂಗಳ ಕಲಾ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾಗಿ, ಸರ್ಕಾರಿ ಪ್ರೌಢಶಾಲೆ ಪಾಪೆ ಮಜಲು ಇದರ ಕಾರ್ಯಾಧ್ಯಕ್ಷರಾಗಿ, ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ,20 ವರ್ಷಗಳ ಕಾಲ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕನಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.



ಪ್ರಸ್ತುತ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು -ಅರಿಯಡ್ಕ ಇದರ ಅಧ್ಯಕ್ಷರಾಗಿ, ಸ್ಪಂದನ ಸೇವಾ ಬಳಗ ಕುಂಬ್ರ ಗೌರವ ಸಲಹೆಗಾರರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ಒಕ್ಕೂಟ ಬಿ ಇದರ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆ ವಲಯಾಧ್ಯಕ್ಷರಾಗಿ, ಸುದ್ದಿ ಬಿಡುಗಡೆ ಪತ್ರಿಕೆಯ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.










