ಜು.28: ರಘುರಾಜ್ ಉಬರಡ್ಕರವರಿಂದ ಮಂಗಳೂರು ಆಕಾಶವಾಣಿಯಲ್ಲಿ ಭಾಷಣ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಶಿಕ್ಷಣ ಸಂಯೋಜಕರು ಹಾಗೂ ಶೈಕ್ಷಣಿಕ ಪರಿವೀಕ್ಷಣಾಧಿಕಾರಿ ರಘುರಾಜ್ ಉಬರಡ್ಕರವರಿಂದ ಜು. 28ರಂದು ರಾತ್ರಿ ಗಂಟೆ 8:30ಕ್ಕೆ ಮಂಗಳೂರು ಆಕಾಶವಾಣಿಯಲ್ಲಿ “ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ ಆರಾಧನೆ” ಎಂಬ ವಿಷಯದಲ್ಲಿ ಭಾಷಣ ಪ್ರಸಾರವಾಗಲಿದೆ.


 ಶಿಕ್ಷಣ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಬಿಎಡ್ ಕಾಲೇಜಿನ ಉಪನ್ಯಾಸಕರಾಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸುಳ್ಯ ಮತ್ತು ಪುತ್ತೂರು ತಾಲೂಕುಗಳ ಐವತ್ತಕ್ಕೂ ಅಧಿಕ ಸ್ಥಳಗಳಲ್ಲಿ ಬೀದಿ ನಾಟಕಗಳು ಇವರ ಮಾರ್ಗದರ್ಶನದಲ್ಲಿ ನಡೆದಿರುತ್ತದೆ. ಮೊಳಕೆ, ಚಿಗುರು, ಹಾಗೂ ದಶ ಸಂಭ್ರಮ ಇವರ ಸಂಪಾದಕತ್ವದಲ್ಲಿ ಬಿಡುಗಡೆಗೊಂಡಿರುವ ಪುಸ್ತಕಗಳು. ಸಾಮಾಜಿಕ ಕಳಕಳಿಯಿಂದ “ನಮ್ಮವನ” “ಮಾದರಿವನ” ಎಂಬ ಕಲ್ಪನೆಯಲ್ಲಿ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳನ್ನು ಉಳಿಸುವ ಯೋಜನೆ ಇವರದ್ದಾಗಿದೆ.


ಧಾರ್ಮಿಕ ಪ್ರವಚನಕಾರರೂ,ವ್ಯಕ್ತಿತ್ವ ವಿಕಸನ ತರಬೇತುದಾರರೂ ಮನೋವಿಜ್ಞಾನ ಹಾಗೂ ಆಪ್ತ ಸಮಾಲೋಚಕರೂ ಆಗಿರುವ ಇವರು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಶಿಕ್ಷಣ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ಕೆಲವು ಬರಹಗಳು ಪುಸ್ತಕ ಹಾಗೂ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುತ್ತದೆ.ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳ ಶಿಕ್ಷಣಾಧಿಕಾರಿಯಾಗಿ, ಶಿಕ್ಷಣದ ಗುಣಮಟ್ಟವನ್ನುಎತ್ತರಿಸಲು ಯೋಜನೆ ರೂಪಿಸುವ ಶೈಕ್ಷಣಿಕ ಸಮಿತಿಯ ಸಂಯೋಜಕರಾಗಿದ್ದಾರೆ. ಇಲಾಖೆ ಹಾಗೂ ಇಲಾಖೇತರ ಸಂಘ ಸಂಸ್ಥೆಗಳು ನಡೆಸುವ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿಯೂ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here