ಜು.26: ಪರಿವಾರ ಬಂಟರ ಸಂಘದಿಂದ ಕೊಟ್ಟಿಬೆಟ್ಟು ಏಳ್ನಾಡುಗುತ್ತು ತರವಾಡಿನ ಸಮೀಪದ ಗದ್ದೆಯಲ್ಲಿ ‘ಕೆಸರ್ಡ್ ಒಂಜಿ ದಿನ’

0

ಪುತ್ತೂರು: ಪರಿವಾರ ಬಂಟರ ಸಂಘ ಕೇಂದ್ರ ಸಮಿತಿ ಮಂಗಳೂರು ಇದರ ಪುತ್ತೂರು ವಲಯದ ವತಿಯಿಂದ ಮಹಿಳಾ ವೇದಿಕೆ ಮತ್ತು ಯುವ ಪರಿವಾರ ಬಂಟರ ವೇದಿಕೆ ಪುತ್ತೂರು ವಲಯದ ಸಹಭಾಗಿತ್ವದಲ್ಲಿ ತೆಂಕಿಲ ಕೊಟ್ಟಿಬೆಟ್ಟು ಏಳ್ನಾಡುಗುತ್ತು ತರವಾಡಿನ ಸಮೀಪದ ಶಶಿಧರ್ ನಾಕ್‌ರವರ ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಜು.26ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ.


ಉದ್ಘಾಟನಾ ಸಮಾರಂಭ:
ಕಾರ್ಯಕ್ರಮವನ್ನು ಶ್ರೀ ರಾಘವೇಂದ್ರ ಮಠ ನೆಕ್ಕಿಲಾಡಿ ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಉದ್ಯಮಿ ಉದಯ ಕುಮಾರ್ ಉದ್ಘಾಟಿಸಲಿದ್ದಾರೆ. ಪರಿವಾರ ಬಂಟರ ಸಂಘ ಮಂಗಳೂರು ಇದರ ನಿಯೋಜಿತ ಸದಸ್ಯರಾದ ಲ|ಟಿ.ಸದಾಶಿವ ನಾೖಕ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಧರ್ಮಸ್ಥಳ ಜನ ಜಾಗೃತಿ ವೇದಿಕೆ ಪುತ್ತೂರು ಮತ್ತು ಭಾರತೀಯ ಜನತಾ ಪಕ್ಷದ ಪುತ್ತೂರು ತಾಲೂಕಿನ ಮಾಧ್ಯಮ ಪ್ರಮುಖ್ ಸತೀಶ್ ನಾೖಕ್ ಪರ್ಲಡ್ಕ, ಕೆಸರುಗದ್ದೆಗೆ ಸ್ಥಳಾವಕಾಶ ನೀಡಿದ ಶಶಿಧರ್ ನಾೖಕ್ ಮುಖ್ಯ ಅಭ್ಯಾಗತರಾಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮಕ್ಕಳಿಗೆ, ಹಿರಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ವಿವಿಧ ಅಟೋಟಗಳು ನಡೆಯಲಿದ್ದು ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here