






ಪುತ್ತೂರು:ಕೋರ್ಟ್ ರಸ್ತೆಯ ಇಂದಿರಾ ಕ್ಯಾಂಟೀನ್ ಎದುರುಗಡೆಯ ಸಾರಥಿ ಭವನದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಎನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಪುತ್ತೂರು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜು.26 ರಂದು ಪುತ್ತೂರು-ಕೊಂಬೆಟ್ಟು ದ್ರಾವಿಡ ಬ್ರಾಹ್ಮಣ ಸಂಘದ ಸಭಾಂಗಣದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಇ.ನಾರಾಯಣ ಹೇರಳೆರವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಸಂಘದ ಸದಸ್ಯರು ಮಹಾಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಮೋಹನ್ ಹೊಳ್ಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















