ಆರ್ಯಾಪು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ.ಗೆ ಬೀಳ್ಕೊಡುಗೆ ಹಾಗೂ ಅಭಿನಂದನೆ

0

ಆರ್ಯಾಪು: ಅಮರ ಜ್ಯೋತಿ, ದಿವ್ಯ ಜ್ಯೋತಿ, ನವ ಜ್ಯೋತಿ, ವಿಶ್ವ ಜ್ಯೋತಿ ವಿಕಲಚೇತನರ ಒಕ್ಕೂಟ, ಪೂರ್ಣ ಜ್ಯೋತಿ ಹಿರಿಯ ನಾಗರಿಕರ ಒಕ್ಕೂಟ ಆರ್ಯಾಪು ಹಾಗೂ ಕುರಿಯ ಒಕ್ಕೂಟದ ವತಿಯಿಂದ ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ. ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

14/10/2020 ರಿಂದ ಪುತ್ತೂರು ತಾಲ್ಲೂಕು ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಎಂ. ಅವರು ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನಿಸಲಾಯಿತು.ಜು.23ರಂದು ಆರ್ಯಾಪು ಗ್ರಾಮ ಪಂಚಾಯತ್ ನೇತಾಜಿ ಸುಭಾಷ್ ಚಂದ್ರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರಿಗೆ ವಿಕಲಚೇತನರ ಇಲಾಖೆ ಹಾಗೂ ಹಿರಿಯ ನಾಗರಿಕರ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಮೋನಪ್ಪ. ಕೆ, ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ರಾಜೇಶ್ವರಿ, ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲಚೇತನರ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಆರ್ಯಾಪು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಯು. ಲಕ್ಷ್ಮಿಕಾಂತ ಹೆಗ್ಡೆ, ಅ.ದಿ.ನ.ವಿ ಪೂರ್ಣ ಜ್ಯೋತಿ ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ರೈ ಅಡ್ಮಿತ್ತಿಮಾರು, ಕಾರ್ಯದರ್ಶಿ ಜಯಕರ ಕಲ್ಪನೆ, ಸಂಜೀವಿನಿ ಒಕ್ಕೂಟದ ಮೇಲ್ವಿಚಾರಕಿ ಅರುಣಾ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here