ಇರ್ದೆ; ಶ್ರೀ ವರಮಹಾಲಕ್ಷೀ ವ್ರತ ಪೂಜೆ- ಒಕ್ಕೂಟದ ಪದಗ್ರಹಣ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ; ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲ ಕ್ಷೇತ್ರ ಇರ್ದೆ ಇದರ ಆಶಯದಲ್ಲಿ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ದೂಮಡ್ಕ ಪೇರಲ್ತಡ್ಕ, ಗುಮ್ಮಟಗದ್ದೆ, ಅಜಲಡ್ಕ, ಅಜ್ಜಿಕಲ್ಲು ಇವುಗಳ ಸಹಕಾರದೊಂದಿಗೆ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಕೃಪಾ ಆಶೀರ್ವಾದದೊಂದಿಗೆ ನಡೆಯುವ 18 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ, ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಜು. 24 ರಂದು ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲ ಕ್ಷೇತ್ರ ಇರ್ದೆ ಇಲ್ಲಿ ಬಿಡುಗಡೆ ಮಾಡಲಾಯಿತು.

ಪೂಜಾ ಸಮಿತಿಯ ಅಧ್ಯಕ್ಷರಾದ  ರಂಜಿನಿ  ವಿ ರೈ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ  ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟು,ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತರಾಮ ಮಡುಕುಳ್ಳಾಯ, ವಲಯಾಧ್ಯಕ್ಷ ಬಾಲಕೃಷ್ಣ ಯನ್, ಒಕ್ಕೂಟದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here