ಕಾಣಿಯೂರು: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಘಟ ಸಮಿತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸವಣೂರು ವಲಯದ ಕಾಣಿಯೂರು ಗ್ರಾಮ ಘಟ ಸಮಿತಿ ಸಹಯೋಗದಲ್ಲಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾಣಿಯೂರು ಶಾಲಾ ಮುಖ್ಯಶಿಕ್ಷಕಿ ಶಶಿಕಲಾ, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ, ಸವಣೂರು ವಲಯ ಸಂಯೋಜಕರಾದ ವೇದಾವತಿ, ಸೇವಾದೀಕ್ಷಿತೆ ನಳಿನಾಕ್ಷಿ, ಕಾಣಿಯೂರು ಘಟ ಸಮಿತಿ ಅಧ್ಯಕ್ಷೆ ವಿಮಲಾ ಎನ್, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ ಮತ್ತಿತರರು ಉಪಸ್ಥಿತರಿದ್ದರು. ಘಟ ಸಮಿತಿಯ ಸುಮಾರು 29ಮಂದಿ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here