







ಕೆಮ್ಮಾಯಿ: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ಜು.25ರಂದು ನಡೆಯಿತು. 250 ಕ್ಕೂ ಹೆಚ್ಚು ಭಕ್ತಾದಿಗಳು ತಪ್ತ ಮುದ್ರಧಾರಣೆ ಹಾಕಿಸಿಕೊಂಡರು.



ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತ್ತಾಯ, ಶ್ರೀಧರ ಬೈಪಾಡಿತ್ತಾಯ, ಬೈಪಾಡಿತ್ತಾಯ ಕುಟುಂಬಸ್ಥರು, ಅರ್ಚಕ ವೃಂದ ಸ್ವಾಮೀಜಿಯವರನ್ನು ಬರಮಾಡಿಕೊಂಡರು. ದೇವಸ್ಥಾನದ ಸಮಿತಿ ಪದಾಧಿಕಾರಿಗಳು, ವಿಷ್ಣುಮೂರ್ತಿ ಭಜನಾ ಮಂಡಳಿ ಪದಾಧಿಕಾರಿಗಳು ಹಾಗು ಸದಸ್ಯರು, ಭಕ್ತರು, ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು.













