ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ ಆಶ್ರಯದಲ್ಲಿ ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ನ ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ ಆಶ್ರಯದಲ್ಲಿ, ಸಂಘದ ಅಧ್ಯಾತ್ಮಿಕ ನಿರ್ದೇಶಕರಾದ ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಡಾ|ಜೆ.ಬಿ ಸಲ್ದಾನ್ಹಾರವರ ಮಾರ್ಗದರ್ಶನದಲ್ಲಿ, ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳ ಸಹಕಾರದಲ್ಲಿ ಕರ್ನಾಟಕ ಸರ್ಕಾರದ ಮನೆ ಬಳಕೆಯ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಮಾಯಿದೆ ದೇವುಸ್ ಚರ್ಚ್ ನ ಮಿನಿ ಸಭಾಂಗಣದಲ್ಲಿ ಜು.26 ರಂದು ನಡೆಯಿತು.

ಈ ಗೃಹಜ್ಯೋತಿ ನೋಂದಣಿ ಪ್ರಕ್ರಿಯೆಗೆ ಗ್ರಾಹಕ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಮೆಸ್ಕಾಂ ಸಿಬ್ಬಂದಿಗಳು ನೋಂದಣಿ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು ನೂರಾರು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ ಅಧ್ಯಕ್ಷ ವಿಲಿಯಂ ನೊರೋನ್ಹಾ, ಕಾರ್ಯದರ್ಶಿ ರುಡೋಲ್ಫ್ ಪಿಂಟೊ ಸಹಿತ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here