ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ 17 ಮಂದಿ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಸ್ಥಳ ನಿಯುಕ್ತಿಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿನಾಯಕ್ ಕರ್ಭಾರಿ ನರ್ವಾಡೆ ಅವರು ಆದೇಶಿಸಿದ್ದಾರೆ.


ಗ್ರಾಮ ಪಂಚಾಯತ್‌ಗಳ ಆಡಳಿತಾತ್ಮಕ ಹಿತದೃಷ್ಠಿಯಿಂದ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾ.ಪಂ.ನ ಪಿಡಿಓ ಭವ್ಯ ಎಂ.ಬಿ.ಅವರನ್ನು ಒಳಮೊಗ್ರು ಗ್ರಾ.ಪಂಗೆ, ಬೆಟ್ಟಂಪಾಡಿ ಗ್ರಾ.ಪಂ.ನ ಸೌಮ್ಯ ಎಂ.ಎಸ್.ಅವರು ಬಂಟ್ವಾಳದ ಕಡೇಶಿವಾಲಯ ಗ್ರಾ.ಪಂಗೆ, ಉಪ್ಪಿನಂಗಡಿ ಗ್ರಾ.ಪಂನ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರನ್ನು ಆರ್ಯಾಪು ಗ್ರಾ.ಪಂಗೆ ಹಾಗೂ ಆರ್ಯಾಪು ಗ್ರಾ.ಪಂನ ನಾಗೇಶ್ ಎಂ.ಅವರನ್ನು ಬೆಳ್ತಂಗಡಿಯ ಧರ್ಮಸ್ಥಳ ಗ್ರಾ.ಪಂಗೆ ವರ್ಗಾವಣೆಗೊಳಿಸಲಾಗಿದೆ.

ವರ್ಗಾವಣೆಗೊಂಡಿರುವ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಬಿಡುಗಡೆಗೊಂಡು ವರ್ಗಾವಣೆಗೊಂಡಿರುವ ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here