






ಪುತ್ತೂರು: ಒಡಿಯೂರು ಗ್ರಾಮ ವಿಕಾಸ ಯೋಜನೆ ಪುತ್ತೂರು, ವಜ್ರಮಾತ ಮಹಿಳಾ ಘಟಕ ಪುತ್ತೂರು, ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು, ಸ್ನೇಹ ಸಂಗಮ ಆಟೋ ಚಾಲಕರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಅವರು ಚಾಲನೆ ನೀಡಿದರು. ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಈಶ್ವರ ಬೇಡೆಕರ್, ಮಹಾಬಲ ಶೆಟ್ಟಿ, ಸುಭಾಷ್ ರೈ ಬೆಳ್ಳಿಪ್ಪಾಡಿ, ವಜ್ರಮಾತ ಅಧ್ಯಕ್ಷೆ ನಯನ ರೈ, ಗುರುದೇವ ಸೇವಾ ಬಳಗದ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಒಡಿಯೂರು ಬ್ಯಾಂಕಿನ ನಿರ್ದೇಶಕ ಜಯಪ್ರಕಾಶ್ ಶೆಟ್ಟಿ, ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕಿ ಸವಿತಾ, ಸಂಯೋಜಕಿ ಶಶಿ, ಸೇವಾ ದೀಕ್ಷಿತೆ ಸುಜಾತ, ರಾಜೇಶ್ವರಿ, ವಿಕಾಸ ವಾಹಿನಿ ಸ್ವಸಹಾಯ ಸಂಘ ಯೋಜನೆ ಪುತ್ತೂರು ಘಟಕ ಸಮಿತಿಯ ಉಪಾಧ್ಯಕ್ಷ ಸುರೇಶ್ ಡಿ, ಸ್ನೇಹ ಸಂಗಮ ಆಟೋ ಚಾಲಕ ಸಂಘದ ಅಧ್ಯಕ್ಷ ತಾರಾನಾಥ ಗೌಡ ಬನ್ನೂರು, ಕಾರ್ಯದರ್ಶಿ ಹರೀಶ್ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.













