







ಕರ್ನೂರು: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಈಶ್ವರಮಂಗಲ ವಲಯದ ಕರ್ನೂರು ಘಟಸಮಿತಿ ಸದಸ್ಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಕರ್ನೂರು ಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.



ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಗುರುಗಳಾದ ಶ್ರೀಯುತ ರಮೇಶ್ ಶಿರ್ಲಾಲು, ವಲಯ ಸಂಯೋಜಕರಾದ ಶ್ರೀಮತಿ ಮಹಿತ ರೈ, ಸೇವಾದೀಕ್ಷಿತರಾದ ಭವ್ಯ, ಘಟ ಸಮಿತಿ ಅಧ್ಯಕ್ಷೆ ನಳಿನಾಕ್ಷಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.













