






ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆಯ ಕೂಡಲೇ ದುರಸ್ತಿ ನಡೆಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಾಯಂಗಳದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.



ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.




ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ತೊಡಗಿದ್ದಾರೆ.










