ಆ.7ಕ್ಕೆ ಪುತ್ತೂರಿನಲ್ಲಿ ತಿರಂಗಾ ಯಾತ್ರೆ : ಪೂರ್ವಭಾವಿ ಸಭೆ

0

ಪುತ್ತೂರು: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆ.7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವನಿಕರು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್, ಲೋಕೇಶ್ ಚಾಕೋಟೆ ಸಹಿತ ಹಲವಾರು ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಯುವ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವ ಭರವಸೆ ನೀಡಿದರು.


ಆಗಸ್ಟ್ 7ರಂದು ಸಂಜೆ 3.30ಗಂಟೆಗೆ ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಆರಂಭವಾಗಲಿದೆ. ದೇಶಭಕ್ತಿಯ ಈ ಮಹಾ ಕಾರ್ಯಕ್ರಮದಲ್ಲಿ ಯುವಜನತೆ, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here