ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

0

ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ಲೋರಾ ಪಾಯಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮರಗಳ ಮಹತ್ವ, ಅವುಗಳ ಸಂರಕ್ಷಣೆ ಹಾಗೂ ಪರಿಸರಕ್ಕೆ ಅವು ನೀಡುವ ಅಮೂಲ್ಯ ಕೊಡುಗೆಯ ಬಗ್ಗೆ ತಿಳಿಸಿದರು.


ಶಾಲೆಯ ವಿದ್ಯಾರ್ಥಿನಿ ಸಮೀಹ ಅವರು ವನಮಹೋತ್ಸವದ ಮಹತ್ವವನ್ನು ವಿವರಿಸಿದರು. ನಂತರ ಮುಖ್ಯೋಪಾಧ್ಯಾಯಿನಿಯವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶೇಷ ಮೆರುಗು ನೀಡಿದರು. ಶಾಲೆಯ ವಿದ್ಯಾರ್ಥಿನಿಯರು ವನ ಸಂರಕ್ಷಣೆಯ ಸಂದೇಶವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿದರು.


ಶಾಲೆಯ ಸಹಶಿಕ್ಷಕಿ ನಿರೀಕ್ಷಾ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ವಂದನೆಗಳನ್ನು ಸಮರ್ಪಿಸಿದರು

LEAVE A REPLY

Please enter your comment!
Please enter your name here