ನಾಳೆ (ಆ.01) ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್‌ ಮೈಸೂರ್‌ ಪುತ್ತೂರಿಗೆ, ಗಾಣಿಗ ಸಮಾಜ ಬಾಂಧವರಿಂದ ಗೌರವಾರ್ಪಣೆ

0

ಪುತ್ತೂರು: ಕರ್ನಾಟಕ ಸರಕಾರ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್‌ ಮೈಸೂರುರವರು ಆ.1ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.


ಬೆಳಿಗ್ಗೆ 11.30ಕ್ಕೆ ಪುತ್ತೂರು ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಯಲಿದೆ. ಯೋಜನೆ/ಕಾರ್ಯಕ್ರಮಗಳ ಬಗ್ಗೆ ಸಹಾಯಕ ಅಭಿವೃದ್ಧಿ ಅಧಿಕಾರಿಯೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಪುತ್ತೂರು ಗಾಣಿಗ ಸಮಾಜ ಬಾಂಧವರಿಂದ ಗೌರವಾರ್ಪಣೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಗಾಣಿಗ ಯಾನೆ ಸಫಲಿಗರ ಸೇವಾ ಸಂಘ (ರಿ.) ಇದರ ಅಧ್ಯಕ್ಷ ಲಕ್ಷ್ಮೀ ಪ್ರಸಾದ್‌ ಬೆಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here