ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಚರಂಡಿಯಲ್ಲಿ ಪತ್ತೆ

0

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75 ವ.) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇಂದು (ಜು.31) ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ ಮಂಗಳವಾರ ವೃದ್ಧ ಕಾಣೆಯಾಗಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಕೆರೆ, ಮತ್ತು ಹಳ್ಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಇಂದು (ಜು.31) ಬೆಳಿಗ್ಗೆ ಕುಕ್ಕಿಲದ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ವೃದ್ಧ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಬಿದ್ದಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಅವರಿಗೆ ಪ್ರಾಥಮಿಕ ಶುಶ್ರೂಷೆ ನೀಡಿ, ಮುರಳಿ ವಿಟ್ಲ ಅವರಿಗೆ ಮಾಹಿತಿ ತಲುಪಿಸಿದ್ದಾರೆ. ಬಳಿಕ ಅಂಬ್ಯುಲೆನ್ಸ್‌ ಮೂಲಕ ಅವರನ್ನು ವಿಟ್ಲಕ್ಕೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here