







ಪುತ್ತೂರು: ಈಶ್ವರಮಂಗಲ ಸಾಂತ್ಯ ಎಂಬಲ್ಲಿ ಸುರಿದ ಗಾಳಿ ಮಳೆಗೆ ಮರವೊಂದು ಉರುಳಿ ವಿದ್ಯುತ್ ತಂತಿಯ ಮೇಲೆ ಬಿದ್ದು ವಾಹನ ಸಂಚಾರಕ್ಕೆ ಅಡಚನೆ ಉಂಟಾದ ಘಟನೆ ಆ.1ರಂದು ಬೆಳಗ್ಗೆ ನಡೆದಿದೆ.



ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಸರಬರಾಜಿನಲ್ಲೂ ವ್ಯತ್ಯಯ ಉಂಟಾಗಿದೆ.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿ ಮರ ತೆರವು ಹಾಗೂ ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದರು.ಯಾವುದೇ ಪ್ರಾಣಹಾನಿ ಅಥವಾ ವಾಹನಗಳಿಗೆ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.













