







ಪುತ್ತೂರು: ಪುತ್ತೂರಿನಲ್ಲಿ ಆ.7ರಂದು ನಡೆಯಲಿರುವ ಬೃಹತ್ ತಿರಂಗಾ ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿದರು.



ಕಾರ್ಯಕ್ರಮದ ರೂಪರೇಷೆ, ಸಂಘಟನೆ ಹಾಗೂ ಯಶಸ್ವಿ ನಿರ್ವಹಣೆ ಕುರಿತು ಸಮಗ್ರ ಸಲಹೆ-ಸೂಚನೆಗಳನ್ನು ನೀಡಿದ ಅವರು ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಬೇಕೆಂದರು.



ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ದೇಶದಾದ್ಯಂತ ಸ್ವಾತಂತ್ರ್ಯೋತ್ಸವವನ್ನು ಹೆಮ್ಮೆಯಿಂದ ಆಚರಿಸುವ ನಿಟ್ಟಿನಲ್ಲಿ ಪುತ್ತೂರಿನ ಈ ತಿರಂಗಾ ಯಾತ್ರೆಯೂ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಸಹಿತ ಹಲವಾರು ಮಂದಿ ಸಭೆಯಲ್ಲಿದ್ದರು.










