ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ KEA

0

ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ದಿನಾಂಕ 07.08.2026 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ
ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 09.08.2026ರಂದು ಉಚಿತ ತರಬೇತಿ ಆಯೋಜನೆ

ತಾಂತ್ರಿಕ ಕಾರಣಗಳಿಂದ ವಿಳಂಬವಾಗುತಿದ್ದ ಗ್ರಾಮ ಆಡಳಿತಾಧಿಕಾರಿ ನೇಮಕಾತಿಯ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಅರ್ಜಿ ಸಲ್ಲಿಕೆಯ ದಿನಾಂಕವನ್ನು 07.08.2026 ಮಂಗಳವಾರದ ವರೆಗೆ ವಿಸ್ತರಿಸಿದ್ದು ಇನ್ನೂ ಅರ್ಜಿ ಸಲ್ಲಿಸಲು ಬಾಕಿ ಇರುವ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಲು ಅವಕಾಶವಿದೆ.


ಅರ್ಜಿ ಸಲ್ಲಿಸಲು ಅರ್ಹತೆಗಳು:
ವಿದ್ಯಾರ್ಹತೆ: ದ್ವಿತೀಯ ಪಿಯುಸಿ
ಒಟ್ಟು ಹುದ್ದೆಗಳು: 572
ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ:
ಕನಿಷ್ಠ: 18 ವರ್ಷ
ಗರಿಷ್ಠ: 40ವರ್ಷ(ಸಾಮಾನ್ಯ ಅಭ್ಯರ್ಥಿಗಳಿಗೆ)
43ವರ್ಷ(OBC ಅಭ್ಯರ್ಥಿಗಳಿಗೆ)
45 ವರ್ಷ(SC,ST, Category 1 ಅಭ್ಯರ್ಥಿಗಳಿಗೆ )

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಮೀಸಲಾತಿಗಾಗಿ ಜಾತಿ ಪ್ರಮಾಣಪತ್ರ, ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.08.2026

ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ತರಬೇತಿ ಆಯೋಜನೆ
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕ 09.08.2026 ಆದಿತ್ಯವಾರದಂದು ಉಚಿತ ತರಬೇತಿಯನ್ನು ಆಯೋಜಿಸಿದ್ದು VAO ನೇಮಕಾತಿ ಪರೀಕ್ಷೆಯನ್ನು ಎದುರಿಸುವ ಕುರಿತು ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿವಿಧ ವಿಸ್ಕೃತವಾದ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಿದ್ದು, ಸದ್ಯ ಅರ್ಜಿ ಸಲ್ಲಿಸಿರುವ ಹಾಗೂ ಸರಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ಸಹ ಈ ಉಚಿತ ತರಬೇತಿಗೆ ಹಾಜರಾಗಬಹುದು ಎಂದು ವಿದ್ಯಾಮಾತಾ ಅಕಾಡೆಮಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಸಂಖ್ಯೆ 9448527606 ನ್ನು ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here