ಕಡಬದಲ್ಲಿ ಇಂದು ಮೊಸರು ಕುಡಿಕೆ ಉತ್ಸವ ಆಮಂತ್ರಣ ಬಿಡುಗಡೆ-ಯಕ್ಷಗಾನ ತಾಳಮದ್ದಳೆ

0

ಕಡಬ: ವಿಶ್ವಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಇದರ ವತಿಯಿಂದ ವಿ.ಹಿಂ.ಪ. ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಇಂದು (ಆ.3) ಸಂಜೆ ನಡೆಯಲಿದೆ.


ಆಮಂತ್ರಣ ಬಿಡುಗಡೆ ಬಳಿಕ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕೌಶಿಕ ಪ್ರತಿಜ್ಞೆ ನಡೆಯಲಿದೆ. ಭಾಗವತರಾಗಿ ಮಹೇಶ್ ಕನ್ಯಾಡಿ, ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚೆಂಡೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಕ್ರತಾಳದಲ್ಲಿ ದಾಮೋದರ ನಾಯಕ್ ಕಡಬ, ಮುಮ್ಮೇಳದಲ್ಲಿ ವಿಶ್ವೇಶ್ವರ ಭಟ್ ಸುಣ್ಣಂಬಳ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ ಕಡಬ ಪ್ರಖಂಡದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here