






ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ 14 ರ ವಯೋಮಾನ ದ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ಪರ್ಧಿಗಳು ತೌಶಿನಿ ಶೆಟ್ಟಿ (7) ಅಲಿಮಾ ಮಿಫಾ (7) ಹಾಗೂ ನೇಹಾ ಅಶ್ರಫ್ (7).



14 ರ ವಯೋಮಾನ ದ 8 ನೇ ತರಗತಿಯ ಪ್ರಾಥಮಿಕ ಶಾಲಾ ಬಾಲಕರ ಸ್ಪರ್ಧೆಯಲ್ಲಿ ಮಯಾಂಕ್ ಜೆ ಸಾಲ್ಯಾನ್ (8) ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.



ಇವರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿದರು.










