ಆ.6: ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಪ್ರತಿಭಾ- 2026’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

0

ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ – 2026’ ಕಾರ್ಯಕ್ರಮವು ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ, ಗೌರವ ಉಪಸ್ಥಿತಿಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಸ್ರಾದೊ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಡಾ. ಶ್ರೀ ಪ್ರಕಾಶ್. ಬಿ  ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಆಂಥೋನಿ ಒಲಿವೇರಾ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಡಾ| ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ, ವಹಿಸಲಿದ್ದಾರೆ. ಅದೇ ರೀತಿ ಸಮಾರೋಪ ಸಮಾರಂಭದಲ್ಲಿ  ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾವಿದರಾದ ಶುಭಾ ಅಡಿಗ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here