ಕುಂತೂರು: ಅಡಿಕೆ ಮರ ಬಿದ್ದು ಮೃತಪಟ್ಟ ವ್ಯಕ್ತಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ- 5 ಲಕ್ಷ ಪರಿಹಾರ ಚೆಕ್ ವಿತರಣೆ

0

ಆಲಂಕಾರು:ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಅಡಿಕೆ ಮರ ಮುರಿದು ತಲೆ ಮೇಲೆ ಬಿದ್ದ ಪರಿಣಾಮ ಕೃಷಿ ಕೂಲಿ ಕಾರ್ಮಿಕ ಮೃತಪಟ್ಟ
ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಜು.31ರಂದು ನಡೆದಿತ್ತು. ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ (66ವ.)ಮೃತಪಟ್ಟ ದುರ್ದೈವಿಯಾಗಿದ್ದರು.


ಇವರು ಗುತ್ತುಪಾಲು ನಿವಾಸಿ ಶೇಷಪತಿ ರೈ ಎಂಬವರ ತೋಟದಲ್ಲಿ ಕೃಷಿ ಸಂಬಂಧಿತ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿ ಹಾಗೂ ಮಳೆಗೆ ಅಡಿಕೆ ಮರವೊಂದು ಮುರಿದು ಯಾದವ ಗೌಡರ ತಲೆ ಮೇಲೆಯೇ ಬಿದ್ದಿತ್ತು ಘಟನೆಯಲ್ಲಿ ಗಂಭೀರ ಗಾಯಗೊಂಡ ಯಾದವ ಗೌಡ ರವರನ್ನು ತಕ್ಷಣ ಕಡಬ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗೆ ಮೃತಪಟ್ಟಿದ್ದರು.

ಆ.4 ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಮೃತರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ತಿಳಿಸಿ ಸರಕಾರದ 5 ಲಕ್ಷ ಪರಿಹಾರ ಮೊತ್ತದಚೆಕ್ಕ್ ನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಸುಳ್ಯ ಮಂಡಲ ಪ್ರಧಾನಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಎಸ್.ಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್,ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ ದೇಂತಾರು, ಕೊಯಿಲಾ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ಕುಂತೂರು ಶಕ್ತಿ ಕೇಂದ್ರ ಪ್ರಮುಖ ಸುಭಿಕ್ಷ,ತಾ.ಪಂ ಮಾಜಿ ಉಪಾಧ್ಯಕ್ಷೆ ಲಲಿತಾ ಈಶ್ವರ್ ಸೇರಿದಂತೆ ಹಲವು ಮಂದಿ ಭೇಟಿಯ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here