ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ಪತ್ತೆ

0

ಉಪ್ಪಿನಂಗಡಿ: ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ವಲಯ ಅರಣ್ಯಾಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.


ರಾಷ್ಟ್ರೀಯ ಹೆದ್ದಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪರಿಶೀಲನೆ ಮಾಡಿದಾಗ ಇದರಲ್ಲಿ ಅಗತ್ಯ ದಾಖಲೆಗಳಿಲ್ಲದೆ ಮರದ ದಿಮ್ಮಿಗಳನ್ನು ಸಾಗಿಸುತ್ತಿರುವುದು ಕಂಡು ಬಂತು. ಮಂಡ್ಯ ಮೂಲದ ರೋಹಿತ್ ಈ ಪ್ರಕರಣದ ಆರೋಪಿಯಾಗಿದ್ದಾನೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ಒಟ್ಟು ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here