ಭಾರಿ ಮಳೆಗೆ ಕಾಂಪೌಂಡ್ ಗೋಡೆ ಕುಸಿತ – ಬಲ್ಯ ಸರಕಾರಿ ಶಾಲೆಗೆ ಸಂಪರ್ಕ ಕಡಿತ, ವಿದ್ಯಾರ್ಥಿಗಳಿಗೆ ಸಮಸ್ಯೆ

0

ಕಡಬ: ಕಡಬ ತಾಲೂಕಿನ ಬಲ್ಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಲ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬುಧವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದ ಮೇಲ್ಭಾಗದ ಕಾಂಪೌಂಡ್ ಗೋಡೆ ಹಾಗೂ ಮಣ್ಣು ಜರಿದು ಬಿದ್ದ ಪರಿಣಾಮ ರಸ್ತೆ ಸಂಪೂರ್ಣ ಬಂದ್ ಆಗಿದೆ.


ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಈ ಘಟನೆ ಸಂಭವಿಸಿದೆ. ಪ್ರಸ್ತುತ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದು, ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೇಲ್ಭಾಗದಲ್ಲಿರುವ ಮಣ್ಣು ಮತ್ತಷ್ಟು ಕುಸಿದು ರಸ್ತೆಗೆ ಬೀಳುವ ಅಪಾಯವೂ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.


ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ರಸ್ತೆ ಮೇಲಿನ ಮಣ್ಣು ಹಾಗೂ ಅವಶೇಷಗಳನ್ನು ತಕ್ಷಣ ತೆರವುಗೊಳಿಸುವುದರ ಜೊತೆಗೆ ಭೂ ಕುಸಿತ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here