







ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಆ.29ರಂದು ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯಲ್ಲಿ ನಡೆಯುವ ಕಡಬ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪ್ರಬಂಧ ಮತ್ತು ಕವನ ಸ್ಪರ್ಧೆಗಳನ್ನು ಕಳುಹಿಸುವ ದಿನಾಂಕವನ್ನು ಆ.15ರ ತನಕ ವಿಸ್ತರಿಸಲಾಗಿದೆ.


ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪ್ರಬಂಧ, ಕವನ ಸ್ಪರ್ಧೆಗೆ ಸಂಬಂಧಿಸಿದಂತೆ ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಡಬ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಕ್ರಮ ವಹಿಸುವಂತೆ ಸೂಚನೆ ನೀಡಿರುತ್ತಾರೆ. ವಿದ್ಯಾರ್ಥಿಗಳು ಪ್ರಬಂಧ, ಕವನಗಳನ್ನು ಕೆ. ಸೇಸಪ್ಪ ರೈ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ರಾಮಕುಂಜ ಗ್ರಾಮ ಮತ್ತು ಅಂಚೆ ಕಡಬ ತಾಲೂಕು 574241 ದ. ಕ. ಇವರಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 8197464142 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.













