ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಬಡಗನ್ನೂರಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಬಡಗನ್ನೂರು: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪಡುಮಲೆ ಘಟಸಮಿತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಮಕ್ಕಳ ಪೋಷಕರು ಜಂಟಿಯಾಗಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಜನ್ಮದಿನದ ಗ್ರಾಮೋತ್ಸವ ಸೇವಾ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಆ.1 ರಂದು ಬಡಗನ್ನೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಆಯೋಜಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ಕುಮಾರ್ ಜೆ ಅವರು ದೀಪ ಬೆಳಗಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.


ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪಡುಮಲೆ ಘಟಸಮಿತಿ ಅಧ್ಯಕ್ಷೆ ಶ್ರೀಮತಿ ಸೇಸಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ, ಬಡಗನ್ನೂರು ಗ್ರಾಮದ ಸೇವಾ ದೀಕ್ಷಿತೆ ಮೋಹಿನಿ ರೈ ದೊಡ್ಡಡ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗನ್ನೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸಾವಿತ್ರಿ ಪೊನ್ನತ್ತಡ್ಕ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಿರೀಶ್ ಗೌಡ ಕನ್ನಯ, ಉಪಾಧ್ಯಕ್ಷೆ ಸುಲೋಚನಾ ನೆರ್ಲಂಪಾಡಿ, ಘಟಸಮಿತಿಯ ಜೊತೆ ಕಾರ್ಯದರ್ಶಿ ಭಾರತಿ ರೈ ಕುದ್ಕಾಡಿ ಉಪಸ್ಥಿತರಿದ್ದರು. ಇದಲ್ಲದೆ ಶಾಲಾ ಶಿಕ್ಷಕ ವೃಂದ, ಮಕ್ಕಳು, ಪೋಷಕರು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಅವರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here