ಶಿರಾಡಿ-ಬರ್ಚಿನಹಳ್ಳದಲ್ಲಿ ಸರಣಿ ಅಪಘಾತ, ಮೂವರಿಗೆ ಗಾಯ

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಆ.5ರಂದು ಬೆಳಗ್ಗೆ ನಡೆದಿದೆ.


ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿಯ ಚಾಲಕ ಬರ್ಚಿನಹಳ್ಳ ತಿರುವು ಹಾಗೂ ಇಳಿಜಾರು ರಸ್ತೆಯಲ್ಲಿ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದ ಈ ವೇಳೆ ಟ್ಯಾಂಕರ್ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸು ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿಯ ಚರಂಡಿಗೆ ಜಾರಿದ್ದು, ಟ್ಯಾಂಕರ್ ಸಹ ನಿಯಂತ್ರಣ ತಪ್ಪಿ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿದ್ದು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಪಿ.ರೆಡ್ಡಿ, ನಿರ್ವಾಹಕ ಮಲ್ಲಿಕಾರ್ಜುನ ಹಾಗೂ ಟ್ಯಾಂಕರ್ ಚಾಲಕ ಅನಿಲ್ ಎಂಬವರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಟ್ಯಾಂಕರ್ ಚಾಲಕ ಅನಿಲ್‌ಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಟ್ಯಾಂಕರ್ ಚಾಲಕ ಅನಿಲ್ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here