ಅಂಬಿಕಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ರಾಜ್ಯ ಪುರಸ್ಕಾರ

0

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್& ಗೈಡ್ಸ್‌ನ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರಾಜ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಸ್ಕೌಟ್ ವಿಭಾಗದಲ್ಲಿ ಪ್ರಥಮ ಪಿಯುಸಿಯ ಹಿಮಾಂಶು ಎಲ್ ಶೆಟ್ಟಿ, ಪ್ರಿಯಾಂಶು ರಾವ್, ನಿಖಿಲ್, ಪರೀಕ್ಷಿತ್ ಕೆ ಪಿ ಹಾಗೂ ಗೈಡ್ಸ್ ವಿಭಾಗದಲ್ಲಿ ಮಂದಿರಾ ಕಜೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ನಡೆಸಿದ 2024-25ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದಕ ಹಾಗೂ ಪ್ರಶಸ್ತಿ ಪತ್ರ ಪಡೆದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಸ್ಕೌಟ್ ಶಿಕ್ಷಕ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here