







ನೆಲ್ಯಾಡಿ: ನೆಲ್ಯಾಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಆ.8ರಂದು ಪೂರ್ವಾಹ್ನ 11ಕ್ಕೆ ಕೇಂದ್ರ ಕಚೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಬಿ.ಪ್ರಸಾದ್ ಕೌಶಲ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಪ್ರಭಾ ಕೆ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















