







ಪುತ್ತೂರು: ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಮಂಜ ಸೇತುವೆ ಸಮೀಪ ಟಿಪ್ಪರ್ ಲಾರಿಯೊಂದು ಚರಂಡಿಗೆ ಮಗುಚಿ ಬಿದ್ದ ಘಟನೆ ನಡೆದಿದೆ.



ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಗೆ ದಾರಿ (ಸೈಡ್) ಬಿಟ್ಟುಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಯಾವುದೇ ಅನಾಹುತವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದರು. ಲಾರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.













