







ಪುತ್ತೂರು:ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು,ಕಡಬ,ಸುಳ್ಯ,ಬೆಳ್ತಂಗಡಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು,ಸರ್ಕಾರಿ,ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ವಸತಿಯುತ ಸಹಿತ ಎಲ್ಲಾ ಪದವಿ ಪೂರ್ವ ಕಾಲೇಜುಗಳು,ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಆ.8ರಂದು ರಜೆ ಘೋಷಿಸಲಾಗಿದೆ.ಪುತ್ತೂರು ಉಪವಿಭಾಗದ ತಾಲೂಕುಗಳ ತಹಸಿಲ್ದಾರರ ಮನವಿ ಮೇರೆಗೆ ಈ ಆದೇಶ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.












