ರಾಮಕುಂಜ ಆ.ಮಾ.ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಮಂತ್ರಿಮಂಡಲದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆ.೬ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ, ಶಾಲಾ ಮಂತ್ರಿಮಂಡಲವು ಮಾದರಿ ಸರಕಾರ ಇದ್ದಂತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸುತ್ತದೆ ಎಂದು ಹೇಳಿ ಆಯ್ಕೆಗೊಂಡ ನಾಯಕರಿಗೆ ಶುಭ ಹಾರೈಸಿದರು. ಅತಿಥಿಯಾಗಿದ್ದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಗೌಡ ಸಾನಿಧ್ಯ ವಳೆಂಜ ಉದ್ಘಾಟಿಸಿ ಮಾತನಾಡಿ, ಆಯ್ಕೆಗೊಂಡ ನಾಯಕರು ತಮ್ಮ ಜವಾಬ್ದಾರಿಗಳನ್ನು ಶಿರಸಾ ಪಾಲಿಸಿದರೆ ವ್ಯಕ್ತಿತ್ವ ವಿಕಸನವಾಗುತ್ತದೆ. ಎಲ್ಲಾ ಅವಕಾಶಗಳನ್ನು ಮನಃ ಪೂರ್ವಕವಾಗಿ ಬಳಸಿಕೊಂಡು ಶಾಲೆಯ ಅಭಿವೃದ್ಧಿಗೂ, ಹೆತ್ತವರಿಗೂ ಕೀರ್ತಿ ತರುವಂತ ವಿದ್ಯಾರ್ಥಿಗಳಾಗಬೇಕೆಂದು ಹೇಳಿ ಶುಭ ಹಾರೈಸಿದರು.


ಸಂಸ್ಥೆಯ ಆಡಾಳಿತಾಧಿಕಾರಿ ಆನಂದ ಎಸ್.ಟಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕ ರಾಧಕೃಷ್ಣ ಪ್ರತಿಜ್ಞಾವಿಧಿ ಬೋದಿಸಿದರು. ಪ್ರೌಢಶಾಲಾ ಮುಖ್ಯೋದ್ಯಾಯಿನಿ ಗಾಯತ್ರಿ ಯು.ಯನ್.ಸ್ವಾಗತಿಸಿ, ಪ್ರ್ರಾಥಮಿಕ ಶಾಲಾ ಮುಖ್ಯೋದ್ಯಾಯಿನಿ ಲೋಹಿತಾ ಎ.ವಂದಿಸಿದರು. ಸಹಶಿಕ್ಷಕ ವಸಂತ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ವ್ಯವಸ್ಥಾಪಕರು, ಶಿಕ್ಷಕ-ಶಿಕ್ಷಕೇತರ ವೃಂದದವರು, ನಿಲಯಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here