







ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರಕಟಿಸಿ ರುವ ತುಳು ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಸ್ವಾತಂತ್ರೋತ್ಸವ ತುಳು ಪುಸ್ತಕೋತ್ಸವಕ್ಕೆ ಚಾಲನೆ ನೀಡಲಾಗಿದೆ.


ಸ್ವಾತಂತ್ರೋತ್ಸವದ ತುಳು ಪುಸ್ತಕೋತ್ಸವನ್ನು ಶುಕ್ರವಾರ ತುಳು ಭವನದ ಅಕಾಡೆಮಿಯ ಗ್ರಂಥಾಲಯದಲ್ಲಿ ದೀಪ ಬೆಳಗಿಸುವ ಮೂಲಕ ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಉದ್ಘಾಟಿಸಿದರು. ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ರಿಜಿಸ್ಟ್ರಾರ್ ಪೂರ್ಣಿಮಾ, ಸದಸ್ಯರಾದ ಬೂಬ ಪೂಜಾರಿ ಮಳಲಿ, ಅಕ್ಷಯ ಆರ್ಶೆಟ್ಟಿ ಸಂತೋಷ್ ಶೆಟ್ಟಿ ಹಿರಿಯಡ್ಕ ಹಾಗೂ ಅಕಾಡೆಮಿ ಮಾಜಿ ಸದಸ್ಯರಾದ ಬೆನೆಟ್ ಜಿ. ಅಮ್ಮನ್ನ ಉಪಸ್ಥಿತರಿದ್ದರು.



ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಯುವ ಈ ರಿಯಾಯಿತಿ ದರದ ಮಾರಾಟ ಆ.31ರ ತನಕ ನಡೆಯಲಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.










