ಬುರೂಜ್ ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

0

ಪುತ್ತೂರು : ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ರಝಾನಗರ ಇಲ್ಲಿ ಆಟಿ ತಿಂಗಳ ವಿಶೇಷ ಆಚರಣೆಯಾದ ಆಟಿದ ಲೇಸ್ ಕಾರ್ಯಕ್ರಮ ನಡೆಸಲಾಯಿತು.


ಈ ಕಾರ್ಯಕ್ರಮವನ್ನು ಪತ್ರಕರ್ತರು ಹಾಗೂ ಸಂಪನ್ಮೂಲ ವ್ಯಕ್ತಿ ಗೋಪಾಲ್ ಆಂಚನ್ ಪಿಂಗಾರ ಅರಳಿಸುವುದರ ಮೂಲಕ ಉದ್ಘಾಟಿಸಿದರು.


ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆರ್ ಆಂಚನ್ ಮಾತನಾಡಿ, ಹೀಗಿನ ಮತ್ತು ಹಿಂದಿನ ಆಚರಣೆ ಬಗ್ಗೆ ತಿಳಿಯಪಡಿಸಿದರು. ವೇದಿಕೆಯಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಜೈನ್, ಸಂಚಾಲಕ ಶೇಖ್ ರಹ್ಮತ್ತುಲ್ಲಾಹ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಲೇರಿಯನ್ ಲಸ್ರಾದೊ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಎಲ್ಸಿ ಲಸ್ರಾದೊ, ವಿಶೇಷ ಆಕರ್ಷಣೆಯಾಗಿ ಪುಂಜಾಲಕಟ್ಟೆ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯಕ್, ಮತ್ತೊಬ್ಬ ಪೋಲಿಸ್ ಅಧಿಕಾರಿ ಕರೀಂ ಸಾಬ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪೋಷಕರು ವಿವಿಧ ಬಗೆಯ ಆಟಿ ತಿಂಗಳ ವಿಶೇಷ ಅಡುಗೆಯನ್ನು ತಂದು ಪರಸ್ಪರ ರುಚಿಯನ್ನು ಸವೆದರು. ವಿದ್ಯಾರ್ಥಿಗಳು ಬೇರೆ ಬೇರೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಸಿದರು. ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ಜಯಶ್ರೀ ಸಾಲ್ಯಾನ್ ಸ್ವಾಗತಿಸಿದರು . ಮಮತಾ ಆರ್ ಧನ್ಯವಾದವಿತ್ತರು. ದಿವ್ಯಾ ಮತ್ತು ಅನುಷಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here