







ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬದ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.


17ರ ವಯೋಮಾನದ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಹವನ್ ಎ.ವೈ. ಹಾಗೂ ಲೋಹಿತ್ ಪಿ. ಅವರು ಪ್ರಥಮ ಸ್ಥಾನ ಪಡೆದು, ಮುಂದಿನ ಹಂತದ ಪ್ರಾಂತ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ತನ್ವಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.



ವಿದ್ಯಾರ್ಥಿಗಳಿಗೆ ಸಂಸ್ಥೆಯ ಕರಾಟೆ ಶಿಕ್ಷಕರಾದ ಯಾದವ ಬೀರಂತ್ತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ಚಂದ್ರ ಕೆ.ಎಸ್. ಅವರು ತರಬೇತಿ ನೀಡಿದ್ದರು.










