







ಪುತ್ತೂರು:ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯ ಲಲಿತ ಕಲಾ ಸಂಘ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಆಟಿಡೊಂಜಿ ಗೌಜಿ ಕಾರ್ಯಕ್ರಮ ಆ.12 ರಂದು ನಡೆಯಲಿದೆ.


ಮಲಾರಬೀಡುವಿನ ಹಿರಿಯ ನಾಟಿವೈದ್ಯ ಬಾಲಕೃಷ್ಣ ರೈರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಜನಪದ ಅಧ್ಯಯನಗಾರರಾದ ದಿನೇಶ್ ರಾಯಿರವರು ಆಟಿ ಕುರಿತು ಮಾತನಾಡಲಿದ್ದಾರೆ.



ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ದಾಸಪ್ಪ ರೈ, ಹಿರಿಯ ದೈವ ನರ್ತಕ ಕೋಟಿ ಪರವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕರಾದ ವಿಜಯಕುಮಾರ್ ಸೊರಕೆ, ನಾಟಿ ವೈದ್ಯೆ ಕಮಲರವರನ್ನು ಅಭಿನಂದಿಸಲಾಗುತ್ತದೆ ಎಂದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಅಕ್ಷಯ ಪದವಿ ಕಾಲೇಜು ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಉಪ ಪ್ರಾಂಶುಪಾಲ ರಕ್ಷಣ್ ಟಿ.ಆರ್, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಅಕ್ಷಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅಭಿಲಾಷ್ ಕ್ಷತ್ರೀಯ, ಅಕ್ಷಯ ಪದವಿ ಕಾಲೇಜು ಐಕ್ಯೂಎಸಿ ಸಂಯೋಜಕಿ ಶ್ರೀಮತಿ ರಶ್ಮಿ ಕೆ, ಲಲಿತಾ ಕಲಾ ಸಂಘದ ಸಂಯೋಜಕಿ ಶ್ರೀಮತಿ ರಶ್ಮಿತಾ ಎಸ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









