ಕಡಬ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಗದ್ದಲ: 112 ಪೊಲೀಸರ ಭೇಟಿ

0

ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ ಹೊರಗುತ್ತಿಗೆ ನೌಕರ ವಜಾ

ಕಡಬ: ಕಡಬ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಲೆಕ್ಕ ಪರಿಶೋಧನೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರನೊಬ್ಬ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಸೋಮವಾರ (ಆ.10) ಬೆಳಗ್ಗೆ 112 ತುರ್ತು ಸ್ಪಂದನ ಪಡೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ.


ಶನಿವಾರ ಕಚೇರಿ ಕೆಲಸಕ್ಕೆ ಸಂಬಂಧಿಸಿದಂತೆ ಸದರಿ ನೌಕರ ಇತರ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎನ್ನಲಾಗಿದ್ದು, ಇದರಿಂದ ಕಚೇರಿಯ ವಾತಾವರಣದಲ್ಲಿ ಅಹಿತಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ನೌಕರನ ವರ್ತನೆಯಿಂದ ಸಿಬ್ಬಂದಿಗಳಿಗೆ ಕಿರಿಕಿರಿ ಉಂಟಾಗಿ, ದೈನಂದಿನ ಕರ್ತವ್ಯ ನಿರ್ವಹಣೆಗೆ ಅಡಚಣೆ ಎದುರಾಗಿತ್ತು ಎಂದು ತಿಳಿದುಬಂದಿದೆ.


ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಕಚೇರಿ ತೆರೆಯುವ ಸಂದರ್ಭದಲ್ಲೂ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ 112 ತುರ್ತು ಸ್ಪಂದನ ಪಡೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಚೇರಿಯ ಪರಿಸ್ಥಿತಿಯನ್ನು ಪರಿಶೀಲಿಸಿ, ಯಾವುದೇ ರೀತಿಯ ಅಡಚಣೆ ಉಂಟುಮಾಡದೆ ಕಚೇರಿಯ ದೈನಂದಿನ ಕಾರ್ಯಕಲಾಪಗಳಿಗೆ ಸಹಕರಿಸುವಂತೆ ಸಂಬಂಧಪಟ್ಟ ನೌಕರನಿಗೆ ತಿಳುವಳಿಕೆ ನೀಡಿದ್ದಾರೆ.


ಗುತ್ತಿಗೆದಾರರಿಂದ ನೌಕರ ವಜಾ
ಈ ನಡುವೆ, ನೌಕರನ ವರ್ತನೆ ಹಾಗೂ ಸಿಬ್ಬಂದಿಗಳ ದೂರಿನ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಹೊರಗುತ್ತಿಗೆ ಸಂಸ್ಥೆಯ ಗುತ್ತಿಗೆದಾರರು ತಕ್ಷಣವೇ ಕ್ರಮ ಕೈಗೊಂಡಿದ್ದು, ಸದರಿ ನೌಕರನನ್ನು ಸೇವೆಯಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ನೌಕರನನ್ನು ಸೇವೆಯಿಂದ ವಜಾಗೊಳಿಸಿರುವ ಕುರಿತು ಗುತ್ತಿಗೆದಾರರು ಕಡಬ ಪಟ್ಟಣ ಪಂಚಾಯತ್‌ಗೆ ಅಧಿಕೃತ ಇ-ಮೇಲ್ ಮೂಲಕ ಮಾಹಿತಿ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಿಂದಾಗಿ ಕೆಲಕಾಲ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದರೂ, ಬಳಿಕ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ

LEAVE A REPLY

Please enter your comment!
Please enter your name here