






ರಾಮಕುಂಜ: ಸಾರ್ವಜನಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಆ.೫ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಸಂಸ್ಥೆಯ ವಿದ್ಯಾರ್ಥಿಗಳಾದ ಚಿಂತನ್ ಎನ್.(7ನೇ) ದ್ವಿತೀಯ, ಕೃತಿಕ್ ಗೌಡ ಎ.ಕೆ.(9ನೇ) ದ್ವಿತೀಯ ಹಾಗೂ ಅಮಿತ್ ಎಂ. ಗೌಡ (10ನೇ) ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.













