ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಆಟಿಡೊಂಜಿ ದಿನ

0

ನೆಲ್ಯಾಡಿ: ಇಚ್ಲಂಪಾಡಿ ನೇರ್ಲ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.10ರಂದು ನಡೆಯಿತು.


ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ನಂದಾ ಪಾದೆ ಅವರು ಆಟಿ ತಿಂಗಳ ಸಾಂಪ್ರದಾಯಿಕ ಹಿನ್ನೆಲೆ, ಆ ತಿಂಗಳಲ್ಲಿ ಸಿಗುವ ವಿವಿಧ ತರಕಾರಿಗಳು ಮತ್ತು ಔಷಧೀಯ ಗುಣಯುಕ್ತ ಸೊಪ್ಪುಗಳ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಪೋಷಕಾಂಶಯುಕ್ತ ಆಹಾರಗಳನ್ನು ಈಗಿನ ಕಾಲದಲ್ಲೂ ಸೇವಿಸುವುದರಿಂದ ಉಂಟಾಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಸಿಕೊಟ್ಟರು. ಎಸ್.ಡಿ.ಎಂ.ಸಿ. ಅಧ್ಯಕ್ಷ ವಸಂತ ಬಿಜೇರು ಅಧ್ಯಕ್ಷತೆ ವಹಿಸಿದ್ದರು. ತಾಯಂದಿರ ಸಮಿತಿಯ ಅಧ್ಯಕ್ಷೆ ಮೋಹಿನಿ ಅಲೆಕ್ಕಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಡಾ| ಗಿರೀಶ್ ಹೆಚ್.ಎಂ. ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಶಾಲೆಯ ಮಕ್ಕಳು, ಪೋಷಕರು, ಎಸ್.ಡಿ.ಎಂ.ಸಿ.ಸದಸ್ಯರು, ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮನೆಗಳಲ್ಲಿ ತಯಾರಿಸಿದ ವಿವಿಧ ಬಗೆಯ ಪೌಷ್ಟಿಕಯುಕ್ತ ಹಾಗೂ ಪರಂಪರಗತ ಆಹಾರ ಪದಾರ್ಥಗಳನ್ನು ಶಾಲೆಗೆ ತಂದು ಮಕ್ಕಳಿಗೆ ಪರಿಚಯಿಸಿದರು.

LEAVE A REPLY

Please enter your comment!
Please enter your name here