ವಿಟ್ಲ: ಗಾಂಜಾ ಸೇವನೆ ಆರೋಪ – ಮನೆ ಮಾಲಿಕನ ಸಹಿತ ನಾಲ್ವರ ಬಂಧನ

0

ವಿಟ್ಲ: ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕ ನಿವಾಸಿ, ಮನೆ ಮಾಲಿಕ ನಾಗರಾಜ ಕೆ.(32 ವ.), ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಕುಮಾರ್ ಕೃಷ್ಣ (27 ವ.), ಬಂಟ್ವಾಳ ತಾಲೂಕು ಕೇಪು ನಿವಾಸಿ ಅಬ್ದುಲ್ ಜಲೀಲ್ (40 ವ.) ಹಾಗೂ ವಿಟ್ಲ ಕಸಬಾ ನಿವಾಸಿ ಅಬ್ದುಲ್ ಖಾದರ್ ಯು (31 ವ.) ಬಂಧಿತ ಆರೋಪಿಗಳು.


ಆ.9ರಂದು ಸಾಯಂಕಾಲ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕ ಎಂಬಲ್ಲಿ ಕಾರೊಂದು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿತ್ತು. ಈ ಬಗ್ಗೆ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣರವರಿಗೆ ಸಾರ್ವಜನಿಕರಿಂದ ಮಾಹಿತಿ ಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ನಾಗರಾಜ ಕೆ. ಎಂಬಾತನ ಮನೆಯ ಅಂಗಳದಲ್ಲಿ ಕಾರೊಂದು ನಿಂತಿರುವುದು ಕಂಡುಬಂದಿತ್ತು. ಅಲ್ಲಿಗೆ ತೆರಳಿ ಅವರನ್ನು ವಿಚಾರಿಸಿದಾಗ ನಾಲ್ವರು ಆರೋಪಿಗಳು ಕಾರಿನಲ್ಲಿ ಗಾಂಜಾವನ್ನು ತಂದು ಸೇದಿರುವುದಾಗಿ ಒಪ್ಪಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಮಾದಕವಸ್ತು ಸೇವನೆ ದೃಢಪಟ್ಟಿದ್ದು, ಈ ಬಗ್ಗೆ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here