ಕಾಣಿಯೂರು ಶಾಲೆಯಲ್ಲಿ ಆಟಿದ ಕೂಟ – ಸನ್ಮಾನ

0

ಕಾಣಿಯೂರು: ಆಧುನಿಕತೆಯ ನಡುವೆ ಮರೆಯಾಗುತ್ತಿರುವ ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ ಹಾಗೂ ವಿಶಿಷ್ಟ ಆಹಾರ ಪದ್ಧತಿಯನ್ನು ಇಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡುವಲ್ಲಿ ಇಂತಹ ಕಾರ್ಯಕ್ರಮ ಅನಿವಾರ್ಯ ಎಂದು ಕರಿಮಜಲು ಗ್ರಾಮ ದೈವಸ್ಥಾನದ ಮೊಕ್ತೇಸರ ಪುಟ್ಟಣ್ಣ ಗೌಡ ಪೈಕ ಹೇಳಿದರು.

ಅವರು ಕಾಣಿಯೂರು ಸ. ಹಿ. ಪ್ರಾ. ಶಾಲೆ, ಶಾಲಾ ಎಸ್ ಡಿ ಎಂ ಸಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಒಡಿಯೂರು ಗ್ರಾಮ ವಿಕಾಸ ಘಟ ಸಮಿತಿ ಕಾಣಿಯೂರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ಆಶ್ರಯದಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಣಿಯೂರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ ಮಾತನಾಡಿ, ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಅತ್ಯಂತ ವಿಶಿಷ್ಟ ಹಾಗೂ ಅರ್ಥಪೂರ್ಣ ಆಚರಣೆಯಾಗಿದೆ ಎಂದರು. ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಮಣ್ಣ ಗೌಡ ಮುಗರಂಜ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋಧ ನೇರೋಳ್ತಡ್ಕ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸೇವಾದೀಕ್ಷಿತೆ ನಳಿನಾಕ್ಷಿ , ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ವಸಂತ ಕಂಪ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ಧರ್ಮಪಾಲ ಕಲ್ಪಡ, ಕಣ್ವರ್ಷಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ರೋಹಿಣಿ ಸುವರ್ಣ ಅಬೀರ, ಕಾಣಿಯೂರು ಶಾಲೆಯ ಎಲ್ ಕೆ ಜಿ, ಯುಕೆಜಿ ಪೋಷಕರ ಸಮಿತಿ ಅಧ್ಯಕ್ಷ ಕುಸುಮಾಧರ ಬೆದ್ರಾಜೆ, ಶಾಲಾ ನಾಯಕಿ ಅಮೂಲ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಶಶಿಕಲಾ ಸ್ವಾಗತಿಸಿ, ಗೌರವ ಶಿಕ್ಷಕಿ ದಿವ್ಯಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದ ಮಾಧವ ಗೌಡ ಕಟ್ಟುತ್ತಾರು ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಉದ್ಘಾಟನೆ:
ಬೆಳಿಗ್ಗೆ ಕಾರ್ಯಕ್ರಮವನ್ನು ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕ ಶ್ರೀನಿಧಿ ಆಚಾರ್ ಕಾರ್ಯಕ್ರಮವನ್ನು ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಸುಜಯರವರು ಕಾರ್ಯಕ್ರಮ ನಿರ್ವಹಿಸಿದರು.

ಸನ್ಮಾನ:
ಪುತ್ತೂರು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಕೆ ಮತ್ತು ಶಾಲಾ ಅಭಿವೃದ್ಧಿಗೆ ಧನ ಸಹಾಯ ನೀಡಿದ ಧ್ರುವ ಕುಮಾರ್ ಕೇರ್ಪಡ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here